John 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
Kannada BSI Bible 2016
ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.
Kannada Bible (KNCL) BSI 2016
ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.