John 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
Kannada BSI Bible 2016
ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.
Kannada Bible (KNCL) BSI 2016
ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.