John 17:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
Kannada BSI Bible 2016
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.
Kannada Bible (KNCL) BSI 2016
ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.