John 17:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
Kannada BSI Bible 2016
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.
Kannada Bible (KNCL) BSI 2016
ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.