John 17:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
Kannada BSI Bible 2016
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.
Kannada Bible (KNCL) BSI 2016
ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.