John 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
Kannada BSI Bible 2016
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.
Kannada Bible (KNCL) BSI 2016
ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.