John 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
Kannada BSI Bible 2016
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.
Kannada Bible (KNCL) BSI 2016
“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.