John 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
Kannada BSI Bible 2016
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.
Kannada Bible (KNCL) BSI 2016
ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.