John 17:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ಇವರಿಗಾಗಿ ಪ್ರಾರ್ಥಿಸುವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
Kannada BSI Bible 2016
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವರಿಗೋಸ್ಕರ ಕೇಳಿಕೊಳ್ಳುತ್ತೇನೆ; ಲೋಕಕ್ಕೋಸ್ಕರ ಕೇಳಿಕೊಳ್ಳದೆ ನೀನು ನನಗೆ ಕೊಟ್ಟವರಿಗೋಸ್ಕರವೇ ಕೇಳಿಕೊಳ್ಳುತ್ತೇನೆ; ನಿನ್ನವರಾಗಿದ್ದಾರೆ.
Kannada Bible (KNCL) BSI 2016
“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು.