John 18:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
Kannada BSI Bible 2016
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.
Kannada Bible (KNCL) BSI 2016
ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.