John 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
Kannada BSI Bible 2016
ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನ ಪೇತ್ರನಲ್ಲಿ ಒಂದು ಕತ್ತಿ ಇತ್ತು; ಅದನ್ನು ಅವನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
Kannada Bible (KNCL) BSI 2016
ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ.