John 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
Kannada BSI Bible 2016
ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.
Kannada Bible (KNCL) BSI 2016
ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.