John 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರಿಗಾಗಿ ಒಬ್ಬನು ಸಾಯುವುದೇ ಮೇಲು ಎಂಬ ಸಲಹೆಯನ್ನು ಕೊಟ್ಟಿದ್ದವನು ಇವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
Kannada BSI Bible 2016
ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಯಫನೇ - ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ಹಿತಕರವೆಂದು ಯೆಹೂದ್ಯರಿಗೆ ಆಲೋಚನೆ ಕೊಟ್ಟವನು.
Kannada Bible (KNCL) BSI 2016
ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ,” ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟ ಕಾಯಫನು ಇವನೇ.