John 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
Kannada BSI Bible 2016
ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನ ಪೇತ್ರನೂ ಮತ್ತೊಬ್ಬ ಶಿಷ್ಯನೂ ಯೇಸುವಿನ ಹಿಂದೆ ಹೋದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಿತಿ ಇದ್ದದರಿಂದ ಯೇಸುವಿನ ಕೂಡ ಮಹಾಯಾಜಕನ ಅಂಗಳದೊಳಕ್ಕೆ ಹೋದನು;
Kannada Bible (KNCL) BSI 2016
ಸಿಮೋನ್ ಪೇತ್ರನು ಮತ್ತು ಪ್ರಧಾನಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸು ಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು.ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನಯಾಜಕನ ಮನೆಯ ಅಂಗಳವನ್ನು ಹೊಕ್ಕನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.