John 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
Kannada BSI Bible 2016
ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಹೊರಗೆ ಬಾಗಲ ಹತ್ತರ ನಿಂತಿದ್ದರಿಂದ ಮಹಾಯಾಜಕನ ಪರಿಚಿತನಾದ ಆ ಶಿಷ್ಯನು ಹೊರಗೆ ಬಂದು ಬಾಗಲು ಕಾಯುವವಳ ಸಂಗಡ ಮಾತಾಡಿ ಪೇತ್ರನನ್ನು ಒಳಕ್ಕೆ ಕರಕೊಂಡು ಹೋದನು.
Kannada Bible (KNCL) BSI 2016
ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.