John 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು. ಪೇತ್ರನು, “ಇಲ್ಲ, ನಾನಲ್ಲ!” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
Kannada BSI Bible 2016
ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಾಗಲು ಕಾಯುವ ದಾಸಿಯು - ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನೇನು? ಎಂದು ಪೇತ್ರನನ್ನು ಕೇಳಲು ಅವನು - ಅಲ್ಲ ಅಂದನು.
Kannada Bible (KNCL) BSI 2016
ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.