John 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
Kannada BSI Bible 2016
ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
Kannada Bible (KNCL) BSI 2016
ಅಷ್ಟರಲ್ಲಿ ಪ್ರಧಾನಯಾಜಕನು ಯೇಸು ಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಹಾಯಾಜಕನು ಯೇಸುವನ್ನು ಅವರ ಶಿಷ್ಯರ ವಿಷಯವಾಗಿಯೂ ಅವರ ಬೋಧನೆಯ ವಿಷಯವಾಗಿಯೂ ಪ್ರಶ್ನಿಸಿದನು.