John 18:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.
Kannada Bible (KNCL) BSI 2016
ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.