John 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
Kannada BSI Bible 2016
ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತಾಡಿದೆನೋ ಅದನ್ನು ಕೇಳಿದವರಲ್ಲಿ ವಿಚಾರಿಸು; ನಾನು ಹೇಳಿದ್ದು ಇವರಿಗೆ ತಿಳಿದಿದೆಯಲ್ಲಾ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ನನ್ನನ್ನು ವಿಚಾರಿಸುವುದೇಕೆ? ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆಮಾಡಿದ್ದು ಏನೆಂದು ಅವರು ಬಲ್ಲರು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.