John 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
Kannada BSI Bible 2016
ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.
Kannada Bible (KNCL) BSI 2016
ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.