John 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
Kannada BSI Bible 2016
ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನಾನು ಮಾತಾಡಿದ್ದರಲ್ಲಿ ಏನಾದರೂ ದೋಷವಿದ್ದರೆ ಆ ದೋಷ ಇಂಥದೆಂದು ಸಾಕ್ಷಿ ಹೇಳು; ನಾನು ಮಾತಾಡಿದ್ದು ಸರಿಯಾಗಿದ್ದರೆ ನನ್ನನ್ನು ಯಾಕೆ ಹೊಡೆಯುತ್ತೀ ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನಾನು ಕೆಟ್ಟದ್ದನ್ನು ಮಾತನಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೆಯದನ್ನು ಮಾತನಾಡಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದರು.