John 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು. ಆದರೆ ಪೇತ್ರನು, “ಇಲ್ಲ, ನಾನಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
Kannada BSI Bible 2016
ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಸೀಮೋನ ಪೇತ್ರನು ನಿಂತುಕೊಂಡು ಚಳಿಕಾಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು - ನೀನು ಅವನ ಶಿಷ್ಯರಲ್ಲಿ ಒಬ್ಬನೇನು? ಎಂದು ಕೇಳಲು ಅವನು - ಅಲ್ಲ ಅಂದನು.
Kannada Bible (KNCL) BSI 2016
ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.