John 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಆ ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
Kannada BSI Bible 2016
ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು - ನಾನು ನಿನ್ನನ್ನು ತೋಟದಲ್ಲಿ ಅವನ ಸಂಗಡ ಕಂಡೆನಲ್ಲವೇ ಅಂದನು.
Kannada Bible (KNCL) BSI 2016
ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು, (ಇವನು ಪೇತ್ರನು ಕಿವಿ ಕತ್ತರಿಸಿದವನ ನೆಂಟ) “ನಿನ್ನನ್ನು ಆತನೊಡನೆ ತೋಟದಲ್ಲಿ ನಾನು ನೋಡಲಿಲ್ಲವೇ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಯಾಜಕನ ಸೇವಕರಲ್ಲಿ ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ಕಾಣಲಿಲ್ಲವೋ?” ಎಂದು ಕೇಳಿದ್ದಕ್ಕೆ,