John 18:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
Kannada BSI Bible 2016
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.
Kannada Bible (KNCL) BSI 2016
ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.