John 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
Kannada BSI Bible 2016
ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.
Kannada Bible (KNCL) BSI 2016
ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.