John 18:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
Kannada BSI Bible 2016
ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.
Kannada Bible (KNCL) BSI 2016
ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.