John 18:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.