John 18:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
Kannada BSI Bible 2016
ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪಸ್ಕಹಬ್ಬದಲ್ಲಿ ನಾನು ಒಬ್ಬನನ್ನು ನಿಮಗೆ ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಅವರನ್ನು ಕೇಳಿದನು.
Kannada Bible (KNCL) BSI 2016
ಹೀಗೆ ಪಿಲಾತನು ಹೊರಗೆ ಯೆಹೂದ್ಯರ ಬಳಿಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುವುದಿಲ್ಲ. ಪಾಸ್ಕಹಬ್ಬದ ಸಂದರ್ಭದಲ್ಲಿ ಒಬ್ಬ ಸೆರೆಯಾಳನ್ನು ಬಿಡುಗಡೆಮಾಡುವ ಪದ್ಧತಿಯಿದೆಯಷ್ಟೆ? ಆದ್ದರಿಂದ ನೀವು ಬಯಸಿದರೆ ಯೆಹೂದ್ಯರ ಅರಸನನ್ನು ನಾನು ಬಿಡುಗಡೆ ಮಾಡುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.