John 18:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
Kannada BSI Bible 2016
ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.
Kannada Bible (KNCL) BSI 2016
ಅವರು, “ನಜರೇತಿನ ಯೇಸುವನ್ನು,” ಎಂದರು. ಯೇಸು, “ನಾನೇ ಆತ,” ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ, “ನಜರೇತಿನ ಯೇಸುವನ್ನು,” ಎಂದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು,” ಎಂದರು. ಅವರನ್ನು ಹಿಡಿದುಕೊಡಲಿದ್ದ ಯೂದನು ಸಹ ಅವರೊಂದಿಗೆ ನಿಂತಿದ್ದನು.