John 18:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಾನೇ ಅವನೆಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೇ ಹುಡುಕುವವರಾದರೆ ಇವರು ಹೋಗಬಿಡಿರಿ ಅಂದನು.
Kannada Bible (KNCL) BSI 2016
ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.