John 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
Kannada BSI Bible 2016
ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿಲಾತನು - ನನ್ನ ಸಂಗಡಲೂ ನೀನು ಮಾತಾಡುವದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬದು ನಿನಗೆ ಗೊತ್ತಿಲ್ಲವೋ ಎಂದು ಆತನನ್ನು ಕೇಳಿದನು.
Kannada Bible (KNCL) BSI 2016
ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.