John 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.
Kannada BSI Bible 2016
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.
Kannada Bible (KNCL) BSI 2016
ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.