John 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
Kannada BSI Bible 2016
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.
Kannada Bible (KNCL) BSI 2016
ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.