John 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆಯಲ್ಲಿ ಅದರ ಹೆಸರು \tl ಗಬ್ಬಥ.\tl*) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
Kannada BSI Bible 2016
ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.
Kannada Bible (KNCL) BSI 2016
ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.