John 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
Kannada BSI Bible 2016
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು.
Kannada Bible (KNCL) BSI 2016
ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.