John 19:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
Kannada BSI Bible 2016
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.
Kannada Bible (KNCL) BSI 2016
ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.