John 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
Kannada BSI Bible 2016
ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಆತನನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು; ಅವರಲ್ಲಿ ಆ ಕಡೆ ಒಬ್ಬನನ್ನು ಈ ಕಡೆ ಒಬ್ಬನನ್ನು ನಡುವೆ ಯೇಸುವನ್ನು ಇಟ್ಟರು.
Kannada Bible (KNCL) BSI 2016
ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.