John 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,
Kannada BSI Bible 2016
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಸಿಪಾಯಿಗಳು ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಕೆಂಪು ಒಲ್ಲಿಯನ್ನು ಆತನಿಗೆ ಹೊದಿಸಿ
Kannada Bible (KNCL) BSI 2016
ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,