John 19:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
Kannada BSI Bible 2016
ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದದರಿಂದ ಯೆಹೂದ್ಯರಲ್ಲಿ ಬಹಳ ಮಂದಿ ಆ ವಿಳಾಸವನ್ನು ಓದಿದರು. ಅದು ಇಬ್ರಿಯ ಲಾತೀನ್ ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
Kannada Bible (KNCL) BSI 2016
ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.