John 19:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯ ಮಹಾಯಾಜಕರು ಪಿಲಾತನಿಗೆ, “‘ಯೆಹೂದ್ಯರ ರಾಜನು’ ಎಂದು ಬರೆಯಬೇಡ. ಆದರೆ, ‘ಇವನು ತನ್ನನ್ನು ಯೆಹೂದ್ಯರ ರಾಜ ಎಂದು ಹೇಳಿಕೊಂಡನು’ ಎಂಬುದಾಗಿ ಬರೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.
Kannada BSI Bible 2016
ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೆಹೂದ್ಯರ ಮಹಾಯಾಜಕರು ಪಿಲಾತನಿಗೆ - ಯೆಹೂದ್ಯರ ಅರಸನು ಎಂದು ಬರೆಯದೆ ನಾನು ಯೆಹೂದ್ಯರ ಅರಸನೆಂದು ಹೇಳಿದವನು ಎಂಬದಾಗಿ ಬರೆಯಬೇಕೆಂತ ಹೇಳಿದರು.
Kannada Bible (KNCL) BSI 2016
ಆದುದರಿಂದ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ: “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.