John 19:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
Kannada BSI Bible 2016
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ಮೇಲುಹೊದಿಕೆಗಳನ್ನು ತಕ್ಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಪಾಲಿನ ಪ್ರಕಾರ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಅಖಂಡವಾಗಿ ಹೆಣೆದದ್ದಾಗಿತ್ತು.
Kannada Bible (KNCL) BSI 2016
ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.