John 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
Kannada BSI Bible 2016
ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
Kannada Bible (KNCL) BSI 2016
ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.