John 19:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.
Kannada BSI Bible 2016
ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು.
Kannada Bible (KNCL) BSI 2016
ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು.