John 19:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
Kannada BSI Bible 2016
ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.
Kannada Bible (KNCL) BSI 2016
ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.