John 19:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
Kannada BSI Bible 2016
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.
Kannada Bible (KNCL) BSI 2016
ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.