John 19:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
Kannada BSI Bible 2016
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಹುಳಿರಸ ತುಂಬಿದ ಗಡಿಗೆ ಇಟ್ಟಿರಲಾಗಿ ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
Kannada Bible (KNCL) BSI 2016
ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.