John 19:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
Kannada BSI Bible 2016
ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.
Kannada Bible (KNCL) BSI 2016
ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.