John 19:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
Kannada BSI Bible 2016
ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನೂ ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
Kannada Bible (KNCL) BSI 2016
ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.