John 19:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
Kannada BSI Bible 2016
ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
Kannada Bible (KNCL) BSI 2016
ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.