John 19:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
Kannada BSI Bible 2016
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;
Kannada Bible (KNCL) BSI 2016
‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.